ಬೆಂಗಳೂರು: ಮಹಿಳೆಯರ ವಿಚಾರದಲ್ಲಿ ಬಿಜೆಪಿಯ ಯಾವ ಯಾವ ನಾಯಕರೂ ಹೇಗೆ ನಡೆದುಕೊಂಡಿದ್ದಾರೆ ಎಂಬುದನ್ನು ಕಾಂಗ್ರೆಸ್ ಟ್ವೀಟ್ ಮೂಲಕ ಸಿಡಿದೆದ್ದಿದೆ. ಬಿಜೆಪಿ ನಾಯಕರು ಮಹಿಳೆಯರಿಗೆ ಕೊಡುವ ಗೌರವ ಇದೇನಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್ 'ಮಹಿಳೆಗೆ ಮಾಧುಸ್ವಾಮಿ ನಿಂದಿಸಿದ್ದರು. ಸಿದ್ದು ಸವದಿ ಮಹಿಳೆಗೆ ಹಲ್ಲೆ ಮಾಡಿದ್ದರು. ರಮೇಶ್ ಜಾರಕಿಹೊಳಿ ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು. ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದು ಆರಗ ಜ್ಞಾನೇಂದ್ರ ಹೇಳಿದ್ರು. ಆದ್ರೆ ಇದೀಗ ಅರವಿಂದ್ ಲಿಂಬಾವಳಿ ಮಹಿಳೆಯ ಮೇಲೆ ದರ್ಪ ಮೆರೆದಿದ್ದಾರೆ. ಇದೇನಾ ಬಿಜೆಪಿಯ ಸ್ತ್ರೀ ಗೌರವದ ಸಂಸ್ಕೃತಿ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.
ಶಾಸಕ ಲಿಂಬಾವಳಿ ರಾಜೀನಾಮೆಯನ್ನ ಕಾಂಗ್ರೆಸ್ ಕೇಳಿದೆ.ಕರ್ನಾಟಕ ಬಿಜೆಪಿ ಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ,ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ..ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ?ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ?ನಳಿನ್ ಕುಮಾರ್ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ? ಹೀಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನ ಕೇಳುತ್ತ ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಟ್ವೀಟ್ ವಾರ್ ನಡೆಸಿದೆ.
PublicNext
03/09/2022 06:54 pm