ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ವರ್ತಕರ ಹೆಸರಿನಲ್ಲಿ ಮತೀಯ ಸಂಘರ್ಷಕ್ಕೆ ಯತ್ನ: ಕಾನೂನು ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು

ಉಪ್ಪಿನಂಗಡಿಯ ಹಿಂದೂ ವರ್ತಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಉಪ್ಪಿನಂಗಡಿಯ ಎಲ್ಲಾ ವರ್ತಕರು ಖಂಡಿಸಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವರ್ತಕರ ನಿಯೋಗ ಪುತ್ತೂರು ಡಿವೈಎಸ್ಪಿ ಗಾನಾ ಪಿ ಕುಮಾರ್ ಮತ್ತು ಉಪ್ಪಿನಂಗಡಿ ಸಬ್ ಇನ್ಸ್ಪೆಕ್ಟರ್ ಕುಮಾರ್ ಕಾಂಬ್ಳೆ ಅವರನ್ನು ಭೇಟಿಯಾಗಿ ದೂರನ್ನು ನೀಡಿದ್ದಾರೆ.

ತಮ್ಮ ವ್ಯಾಪಾರ ಮಳಿಗೆಯ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷಕ್ಕೆ ಯತ್ನಿಸುವವರನ್ನ ಪತ್ತೆ ಹಚ್ಚುವಂತೆ ಮನವಿ ಮಾಡಲಾಗಿದೆ. ಇಂದು ಬೆಳಗ್ಗೆಯಿಂದ ಉಪ್ಪಿನಂಗಡಿ ಪೇಟೆಯ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಾದಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Edited By :
Kshetra Samachara

Kshetra Samachara

25/03/2022 01:23 pm

Cinque Terre

6.2 K

Cinque Terre

0

ಸಂಬಂಧಿತ ಸುದ್ದಿ