ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣನಗರಿಯಲ್ಲಿ ಹೆಚ್ಚುತ್ತಿದೆ ಕೊರೋನಾತಂಕ : ಸಾವಿರ ದಾಟಿದ ಸಕ್ರಿಯ ಪ್ರಕರಣಗಳು!

ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.ಜಿಲ್ಲೆಯಲ್ಲಿ

ಗುರುವಾರ 4.83 ಪಾಸಿಟಿವಿಟಿ ರೇಟ್ ದಾಖಲಾಗಿದೆ.

ಸೋಮವಾರ 9.22 ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿತ್ತು. ಏಕಾಏಕಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ,ಸದ್ಯ ಜಿಲ್ಲೆಯಲ್ಲಿ 1000 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕಳೆದ ಒಂದು ವಾರದಲ್ಲಿ 829 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು ಗಮನಾರ್ಹ.

ಪಕ್ಕದ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ.ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ತೀವ್ರ ಹೆಚ್ಚಳದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಆತಂಕ ಮನೆ ಮಾಡಿದೆ.

Edited By : PublicNext Desk
Kshetra Samachara

Kshetra Samachara

30/07/2021 02:22 pm

Cinque Terre

4.5 K

Cinque Terre

0