ಮಲ್ಪೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಟಿ.ಸಿ.ಪಿ ವಿಭಾಗ) ಉಡುಪಿ ಜಿಲ್ಲೆ, ಸಮುದಾಯ ಆರೋಗ್ಯ ವಿಭಾಗ ಮಣಿಪಾಲ, ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ, ಮಲ್ಪೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಮೀನುಗಾರರ ಸಂಘದ ಸಮುದಾಯ ಭವನದಲ್ಲಿ ಮೀನುಗಾರರ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಶಾಸಕರಾದ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು, ಸಂಬಂಧಪಟ್ಟ ಆರೋಗ್ಯ ಇಲಾಖೆಯ ಅಧಿಕಾರಿಗಳು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
02/08/2021 12:34 pm