ಮಲ್ಪೆ: ಮಲ್ಪೆ ಮೀನುಗಾರರ ಸಂಘ ಮಲ್ಪೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ, ಉಡುಪಿ ಇವರ ಸಹಯೋಗದೊಂದಿಗೆ ಮಲ್ಪೆ ಮೀನುಗಾರರ ಸಂಘದಲ್ಲಿ ಇಂದು "ಮೀನುಗಾರರಿಗೆ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ" ನಡೆಯಿತು. ಶಾಸಕರಾದ ಕೆ. ರಘುಪತಿ ಭಟ್ ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಕಾರ್ಯದರ್ಶಿಗಳಾದ ರತ್ನಾಕರ ಸಾಲ್ಯಾನ್, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ತಾಲೂಕು ಆರೋಗ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಕೆ. ಗಣೇಶ್ ಮತ್ತು ಮಲ್ಪೆ ಮೀನುಗಾರರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
18/08/2021 12:22 pm