ಉಡುಪಿ: ದೇಶದಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ವಿತರಣೆಗೈದು ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಇಂದು ಗ್ರಾಮಾಂತರ ಬಿಜೆಪಿ ವತಿಯಿಂದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಕೆ. ರಘುಪತಿ ಭಟ್ ರವರು ಭಾಗವಹಿಸಿ ಈ ಸಾಧನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು.
ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಉಪಾಧ್ಯಕ್ಷರಾದ ರಘುಪತಿ ಬ್ರಹ್ಮಾವರ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ದೇವಾನಂದ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ ಹಾಗೂ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಜಿತ್ ಶೆಟ್ಟಿ ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
26/10/2021 06:36 pm