ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಕೆಎಂಸಿಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ

ಮಣಿಪಾಲ: ಇದೀಗ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅರ್ಹರಾಗಿರುವ ಹಿರಿಯ ನಾಗರಿಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ಕೊಡಲಾಗುವುದು. ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳು ದಾಟಿದ 60 ವರ್ಷ ಮೇಲ್ಪಟ್ಟ, ಅಸ್ವಸ್ಥತೆಯಿಂದ ಬಳಲುತ್ತಿರುವ ನಾಗರಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ತಿಳಿಸಿದ್ದಾರೆ.

ಅವಶ್ಯವಿದ್ದವರು ಕೋವಿನ್ ಆಪ್ ನಲ್ಲಿ ನೋಂದಣಿ ಮಾಡಿ ಅಥವಾ ನೇರವಾಗಿ ಆಧಾರ್ ಕಾರ್ಡ್ ಅಥವಾ  ಸರ್ಕಾರ ನಿಗದಿಪಡಿಸಿರುವ ಯಾವುದಾದರೂ ದಾಖಲೆಯೊಂದಿಗೆ  ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಬರಲು ಕೋರಲಾಗಿದೆ. ಲಸಿಕೆಯನ್ನು 3ನೇ ಶನಿವಾರ ಮತ್ತು ಆದಿತ್ಯವಾರ ಹೊರತುಪಡಿಸಿ ವಾರದ ಎಲ್ಲ ದಿನ  ಬೆಳಿಗ್ಗೆ 9.30 ರಿಂದ ಸಂಜೆ 3.30 ರತನಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0820  2922761ಗೆ  ಕರೆ ಮಾಡಬಹುದು ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

01/02/2022 08:09 pm

Cinque Terre

1.56 K

Cinque Terre

0