ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆ ಸಮೀಪ ಇರುವ ವಸತಿ ಸಂಕೀರ್ಣದ ಹನ್ನೊಂದನೇ ಮಹಡಿಯ ಮೇಲಿನಿಂದ ಜಿಗಿದು ವಯೋವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪಿ. ನಾರಾಯಣ ಪೂಜಾರಿ (80) ಕೊಡಂಕೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಶವಾಗಾರಕ್ಕೆ ಸಾಗಿಸಲು ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ಸಹಕರಿಸಿದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
Kshetra Samachara
11/10/2020 12:27 pm