ಉಡುಪಿ : ಫೇಸ್ಬುಕ್ ಮೂಲಕ ಸೌದಿ ದೊರೆ ಹಾಗೂ ಅರೇಬಿಯಾದ ಪವಿತ್ರ ಕ್ಷೇತ್ರಗಳ ಕುರಿತು ಅವಹೇಳನಕಾರಿ ವಾಕ್ಯಗಳನ್ನು ಪ್ರಕಟಿಸಿದ್ದಾರೆ ಎಂಬ ಆರೋಪದಲ್ಲಿ ಹರೀಶ್ ಬಂಗೇರ ಎಂಬುವವರನ್ನು ಬಂದಿಸಲಾಗಿದೆ.
ಆದ್ರೆ ಬಂಧಿತ ಹರೀಶ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಠಿಸಿದ್ದ ಇಬ್ಬರು ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ದ ಉಡುಪಿ ಸೆನ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಮೂಡುಬಿದಿರೆಯ ಸಹೋದರರಾದ ಅಬ್ದುಲ್ ಹುಯೇಸ್ ಹಾಗೂ ಅಬ್ದುಲ್ ತುವೇಸ್ ಅನ್ನು ಬಂಧಿಸಲಾಗಿದ್ದು, ಈಗ ತನಿಖೆಯನ್ನು ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿ ಸೇರಿದಂತೆ ಈ ಕೃತ್ಯವನ್ನು ಆರೋಪಿಗಳೇ ಮಾಡಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹ ಮಾಡಿದ್ದೇವೆ.
ಮುಂಬರುವ ದಿನಗಳಲ್ಲಿ ಸರ್ಕಾರದ ಮುಖೇನ ಹರೀಶ್ ಬಂಗೇರ ಅವರನ್ನು ಸೌದಿಯ ಜೈಲಿನಿಂದ ಬಿಡುಗಡೆಗೊಳಿಸಿ ಕರೆದುಕೊಂಡು ಬರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.
Kshetra Samachara
19/10/2020 03:41 pm