ಉಡುಪಿ: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ಪರ್ಸ್ ಕಳವು ಮಾಡಿದ ಮೂವರು ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು.
ಬಂಧಿತರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಿನ್ನೆ ಆರೋಪಿ ಮಹಿಳೆಯರು ಕಡಿಯಾಳಿಯಿಂದ ಬಸ್ ಹತ್ತಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅರ್ಚನಾ ರಾವ್ ಎಂಬುವರ ಪಕ್ಕ ನಿಂತಿದ್ದಾರೆ.
ಅವರಿಗೆ ಗೊತ್ತಾಗದಂತೆ ಅವರ ಹೆಗಲ ಮೇಲೆ ಇದ್ದ ಬ್ಯಾಗಿನ ಜೀಪ್ ತೆರೆದು ಅದರ ಒಳಗಡೆ ಇದ್ದ ಪರ್ಸನ್ನು ಕಳವು ಮಾಡಿದ್ದಾರೆ.
ಆ ಪರ್ಸ್ ನಲ್ಲಿ ವಿವಿಧ ಬ್ಯಾಂಕ್ ಗಳ 4 ಎಟಿಎಂ ಕಾರ್ಡ್, ವೋಟರ್ ಐಡಿ, 5 ಸಾವಿರ ರೂ. ನಗದು ಹಾಗೂ ಇತರೇ ದಾಖಲೆ ಪತ್ರಗಳು ಇದ್ದವು.
ಬಳಿಕ ಆ ಮಹಿಳೆಯರು ಬ್ಯಾಗಿನಲ್ಲಿದ್ದ ಚೀಟಿಯಲ್ಲಿ ಬರೆದಿಟ್ಟಿದ್ದ ಎಟಿಎಂ ಪಿನ್ ಬಳಸಿ 25,000ರೂ. ಹಣವನ್ನು ಡ್ರಾ ಮಾಡಿದ್ದರು.
ದೂರು ದಾಖಲಿಸಿಕೊಂಡಿದ್ದ ಉಡುಪಿ ನಗರ ಪೊಲೀಸರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Kshetra Samachara
22/10/2020 07:50 am