ಉಡುಪಿ: ಒಂಟಿ ಮಹಿಳೆ, ಪುರುಷರನ್ನೇ ಗುರಿಯಾಗಿಸಿ ಸುಲಿಗೆ ಮಾಡುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ಅಂತರ್ ರಾಜ್ಯ ದರೋಡೆಕೋರರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಮಪುರ ನಿವಾಸಿಗಳಾದ ಅಕ್ಷಯ್ ಸಂಜಯ್ ಗೋಸಾವಿ (22), ಜಾಕೀರ್ ಹುಸೇನ್ (26), ಕಂಬರ್ ರಹೀಂ ಮಿರ್ಜಾ (32) ಮತ್ತು ಶಾಹರುಖ್ ಬಂದೆನವಾಜ್ ಶೇಖ್ (24) ಬಂಧಿತರು. ಆರೋಪಿಗಳಿಂದ 7ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ದರೋಡೆ ನಡೆಸಿದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಉಡುಪಿ ನಗರ, ಕುಂದಾಪುರ, ವಿಜಯಪುರ, ಚಿಕ್ಕಮಗಳೂರು, ಬಂಟ್ವಾಳ, ಮಂಗಳೂರಿನಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.
Kshetra Samachara
22/10/2020 04:48 pm