ಶಿರ್ವ: ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದು ಒಬ್ಬಂಟಿ ಮಹಿಳೆಯ ಮನೆಗೆ ಬಂದ ಅಪರಿಚಿತನೋರ್ವ ಆಕೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ಬಂಟಕಲ್ಲು ದೇವಸ್ಥಾನದ ಬಳಿ ಶನಿವಾರ ಸಂಜೆ ನಡೆದಿದೆ.
ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ವಸಂತಿ (72) ಚಿನ್ನದ ಸರ ಕಳೆದುಕೊಂಡ ಮಹಿಳೆ. ಬೈಕ್ನಲ್ಲಿ ಬಂದ ಅಪರಿಚಿತ ವಸಂತಿ ಅವರ ಬಳಿ ಕುಡಿಯಲು ನೀರು ಕೊಡುವಂತೆ ಕೇಳಿದ್ದ. ಬಳಿಕ ವಸಂತಿ ಮನೆಯೊಳಗೆ ಹೋಗುತ್ತಿದ್ದಂತೆ ಅವರನ್ನು ಹಿಂಬಾಲಿಸಿದ ವಂಚಕ ಮನೆಯೊಳಗೆ ಹೋಗಿ ಮಹಿಳೆಯ ಕುತ್ತಿಗೆಯಲ್ಲಿದ್ದ 36 ಗ್ರಾಂ ತೂಕದ 1.60 ಲಕ್ಷ ರೂ ಮೌಲ್ಯ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಈ ಕುರಿತು ವಸಂತಿ ಅವರು ಶಿರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
Kshetra Samachara
22/11/2020 03:27 pm