ಕುಂದಾಪುರ: ಕೋಡಿ ಸಮೀಪ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರಲ್ಲಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಪಾರಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಮೃತ ಮಂಜುನಾಥ ಹಾಗೂ ಆತನ ಸ್ನೇಹಿತ ಮಂಜುನಾಥ ಕೆಲಸ ಇಲ್ಲದ ಕಾರಣ ಕುಂದಾಪುರ ಸಮೀಪದ ಎಂ ಕೋಡಿಗೆ ಸ್ನಾನಕ್ಕೆಂದು ತೆರಳಿದ್ದರು.
ಇಬ್ಬರು ಅರಬ್ಬಿ ಸಮುದ್ರಕ್ಕೆ ಇಳಿದಿದ್ದು, ಅಲೆಯ ರಭಸಕ್ಕೆ ಮಂಜುನಾಥ ಸಮುದ್ರದಲ್ಲಿ ಮುಳುಗಿದ್ದು, ಇನ್ನೊಬ್ಬ ಸಾವಿನ ಅಂಚಿನಿಂದ ಪಾರಾಗಿದ್ದಾನೆ.
ಸ್ಥಳೀಯರ ಸಹಕಾರದಿಂದ ಮೃತ ಯುವಕನ ಶವವನ್ನು ಮೇಲಕ್ಕೆತ್ತಿದ್ದು, ಕುಂದಾಪುರದ ಶವಾಗಾರದಲ್ಲಿ ಇರಿಸಲಾಗಿದೆ.
ಕುಂದಾಪುರ ಪೋಲಿಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Kshetra Samachara
23/11/2020 07:43 pm