ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ತಂದೆಗೆ ಆಜೀವ ಜೈಲು

ಉಡುಪಿ: ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿದ್ದ ತಂದೆಯ ಮೇಲಿನ ದೋಷಾರೋಪ ಸಾಬೀತಾಗಿದ್ದು, ಅಪರಾಧಿಗೆ ಕೋರ್ಟ್ ಜೀವನ ಪರ್ಯಂತ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶ ಯಾದವ್ ವನಮಾಲಾ ಆನಂದರಾವ್ ಈ ಆದೇಶ ನೀಡಿದ್ದಾರೆ.

ಆರೋಪಿ ಪತ್ನಿ ಮಾನಸಿಕ ಖಿನ್ನರಾಗಿದ್ದು, ಕಿರಿಯ ಮಗಳಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಹಿರಿಯ ಮಗಳು ಇದಕ್ಕೆ ವಿರೋಧಿಸಿದ್ದಳು. ನಂತರದಲ್ಲಿ ಪತ್ನಿ ಮೃತರಾಗಿದ್ದು, ಆರೋಪಿ ಮಾತ್ರ ಈ ಚಾಳಿ ಬಿಟ್ಟಿರಲಿಲ್ಲ. ಸ್ವಂತ ತಂದೆಯೇ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ 16 ವರ್ಷದ ಹಿರಿಯ ಮಗಳಿಗೆ ಲೈಂಗಿಕ ದೌರ್ಜನ್ಯವೆಸಗಿದ್ದರ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ತಂದಿದ್ದು, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ, ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. 2019 ಅಕ್ಟೋಬರ್ ನಲ್ಲಿ ಕಾರ್ಕಳ ವೃತ್ತ ಕಚೇರಿ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿತ್ತು.

ಮೊದಲಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಹೇಶ್‌ ಪ್ರಸಾದ್ ತನಿಖೆ ನಡೆಸಿದ್ದು, ಬಳಿಕ ಸಿಪಿಐ ಸಂಪತ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಒಟ್ಟು 26 ಮಂದಿ ಸಾಕ್ಷಿಗಳ ಪೈಕಿ ಸಂತ್ರಸ್ತ ಸಹೋದರಿಯರು ಹಾಗೂ ದೂರುದಾರರು ಸೇರಿದಂತೆ 8 ಮಂದಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ತಂದೆ ನಡೆಸಿದ ಕೃತ್ಯ ಸಾಬೀತಾಗಿದೆ ಎಂದು ಆದೇಶಿಸಿದೆ.

Edited By : Vijay Kumar
Kshetra Samachara

Kshetra Samachara

30/11/2020 07:49 pm

Cinque Terre

17.19 K

Cinque Terre

2

ಸಂಬಂಧಿತ ಸುದ್ದಿ