ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ.ಅಮಾನತು

ಉಡುಪಿ: ಉಡುಪಿಯ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಅವರನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಅವರ ವಿರುದ್ಧ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಕ್ರಮ ಕೈಗೊಂಡಿದೆ.
ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಶಾಲೆಯಿಂದ ಅಗತ್ಯವಿರುವ ಶಾಲೆಗಳಿಗೆ ನಿಯೋಜನೆ ಮಾಡಿ, ಆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯಮಗಳಿಗೆ ವಿರುದ್ಧವಾಗಿ ನೇಮಕಾತಿ ಮಾಡಿದ್ದರು ಎಂಬ ಆರೋಪವಿದೆ. ಕಚೇರಿಯ ಕರ್ತವ್ಯ ನಿರ್ವಹಣೆ, ಅತಿಥಿ ಶಿಕ್ಷಕರ ನಿಯೋಜನೆ ಮತ್ತು ಅಕ್ಷರ ದಾಸೋಹ ಕಾರ್ಯಕ್ರಮ ಸರಿಯಾಗಿ ನಿರ್ವಹಿಸದಿರುವ ಆರೋಪವೂ ಇವರ ಮೇಲಿದೆ. ಆದರೆ ತಮ್ಮ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿದ್ದು ,ಇದೊಂದು ಪಿತೂರಿ ಎಂದು ಮಂಜುಳಾ ಪ್ರತಿಕ್ರಿಯೆ ನೀಡಿದ್ದಾರೆ.

Kshetra Samachara

Kshetra Samachara

10 days ago

Cinque Terre

4.56 K

Cinque Terre

1

  • mangesha
    mangesha

    takka shikse agbeku