ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದು, ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ.
2016 ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಭಾಸ್ಕರ್ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದ ಪ್ರಮುಖ ಆರೋಪಿಗಳು.
Kshetra Samachara
12/10/2020 01:07 pm