ಹಿರಿಯಡ್ಕ: ಹಾಡಹಗಲೇ ಹಿರಿಯಡ್ಕದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯಡ್ಕ ಪೇಟೆಯಲ್ಲಿ ಗುರುವಾರ ಹಾಡಹಗಲೇ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ನಡೆದಿತ್ತು. ಕೊಲೆ ಆರೋಪಿಗಳಾದ ಮನೋಜ್ ಕೋಡಿಕೆರೆ ಸೇರಿದಂತೆ ಐವರನ್ನು ಬಂಧಿಸಿರುವ ಪೊಲೀಸರು ಮಧ್ಯಾಹ್ನ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈಗಾಗಲೇ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Kshetra Samachara
26/09/2020 04:54 pm