ಉಡುಪಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ 8ರ ಹರೆಯದ ಬಾಲಕಿಗೆ ಕ್ಷುಲ್ಲಕ ಕಾರಣಕ್ಕೆ ತಾಯಿ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಥಳಿಸಿದ್ದಾರೆ.
ಈ ಕೃತ್ಯ ಗಮನಿಸಿದ ಪರಿಸರದ ನಿವಾಸಿ ಪೊಲೀಸ್ ಕಾನ್ ಸ್ಟೇಬಲ್ ಸಂತೋಷ್ ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ.
ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಗಮನಕ್ಕೆ ತರಲಾಯಿತು.
ಅವರ ನಿರ್ದೇಶನದಂತೆ ಬಾಲಕಿಯನ್ನು ಪುನರ್ವಸತಿಗಾಗಿ ನಿಟ್ಟೂರಿನ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Kshetra Samachara
29/12/2020 04:27 pm