ಉಡುಪಿ: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಉಡುಪಿಯ ಎಂಜಿಎಂ ಕಾಲೇಜು ಬಳಿ ನಡೆದಿದೆ.
ಮಹಾರಾಷ್ಟ್ರ ನೋಂದಣಿಯ ಕಾರು ಉಡುಪಿಯಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು. ಇದೇ ಸಂದರ್ಭದಲ್ಲಿ ಎಂಜಿಎಂ ಕಾಲೇಜು ಬಳಿ ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿ ಹೊಡೆದ ಬಳಿಕ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಗುದ್ದಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ.
Kshetra Samachara
29/12/2020 10:33 pm