ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ

ಉಡುಪಿ: ಉಡುಪಿಯ 76 ಬಡಗುಬೆಟ್ಟು ಗ್ರಾಮದಲ್ಲಿ ವ್ಯಕ್ತಿಯೋರ್ವರ ಶವ, ಹಳೆ ಮನೆಯ ಜಂತಿಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಗುರುವಾರ ರಾತ್ರಿ ಕಂಡುಬಂದಿದೆ.

ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ನಾಲ್ಕು ದಿನಗಳು ಕಳೆದಿರಬಹುದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52), ತಂದೆ ಗೋಪಾಲ ಶೆಟ್ಟಿ ಎಂದು ಗುರುತಿಸಲಾಗಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸಿ ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ಸಹಕರಿಸಿದರು.

Edited By : Nagaraj Tulugeri
Kshetra Samachara

Kshetra Samachara

15/01/2021 11:56 am

Cinque Terre

6.56 K

Cinque Terre

1

ಸಂಬಂಧಿತ ಸುದ್ದಿ