ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಪ್ರಾಪ್ತೆಗೆ ದೈಹಿಕ ಹಿಂಸೆ; ಯುವಕನ ವಿರುದ್ಧ ಪೋಕ್ಸೊ

ಕೋಟ: 27ರ ಹರೆಯದ ಯುವಕನೊಬ್ಬ ಬಾಲಕಿಗೆ ಮದುವೆ ಆಗುವುದಾಗಿ ನಂಬಿಸಿ ಮದುವೆಗೆ ಮುಂಚೆಯೇ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸುವಂತೆ ಕಾನೂನು ಪರಿವೀಕ್ಷಣಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿಯ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮತ್ತು ರಕ್ಷಣಾಧಿಕಾರಿ ಕಪಿಲಾ ಅವರು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ

ವಿಷಯ ಬೆಳಕಿಗೆ ಬಂದಿದೆ.

ಮಹಿಳಾ ಠಾಣಾ ನಿರೀಕ್ಷಕ ಮಂಜಪ್ಪ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕಿ ವೈಲೆಟ್ ಫೆಮಿನಾ ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಕೋಟ ಪೊಲೀಸ್ ಠಾಣೆ ಸಹಾಯಕ ಉಪ ನಿರೀಕ್ಷಕಿ ಮುಕ್ತಾ ಅವರು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಹಾಗೂ ಸ್ಥಳೀಯರಿಗೆ ಪೋಕ್ಸೊ ಮತ್ತು ಬಾಲ್ಯ ವಿವಾಹ ಪದ್ಧತಿ ಬಗ್ಗೆ ಅರಿವು ಮೂಡಿಸಿದರು.

Edited By : Nirmala Aralikatti
Kshetra Samachara

Kshetra Samachara

08/02/2021 06:33 pm

Cinque Terre

8.38 K

Cinque Terre

0

ಸಂಬಂಧಿತ ಸುದ್ದಿ