ಬ್ರಹ್ಮಾವರ: ಪತಿ ಮತ್ತು ಮಗನೊಂದಿಗೆ ತೆರಳುತ್ತಿದ್ದ ಗೃಹಿಣಿಯೋರ್ವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ ಇಂದು ನಿಧನರಾಗಿದ್ದಾರೆ.
ಕೆಲವೇ ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ್ದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗನೊಂದಿಗೆ ಕೋಟದಲ್ಲಿರುವ ತನ್ನ ತಂದೆ ತಾಯಿ ಮನೆಗೆ ದ್ವಿಚಕ್ರ ವಾಹನದಲ್ಲಿ ಸೋಮವಾರ ತೆರಳುತ್ತಿದ್ದ ಸರಿತಾ ಪಿಂಟೊ (38), ಬ್ರಹ್ಮಾವರದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಪತಿ ಮತ್ತು ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದ ಸರಿತಾರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು, 2 ದಿನಗಳ ಜೀವನ್ಮರಣ ಹೋರಾಟದಲ್ಲಿದ್ದ ಸರಿತಾ ಇಂದು ನಿಧನರಾಗಿದ್ದಾರೆ.
ಮೃತರು ಸಹೋದರ ಧರ್ಮಗುರು, ತಾಯಿ, ಪತಿ, ಪುತ್ರಿ, ಪುತ್ರ, ಇಬ್ಬರು ಸಹೋದರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಗುರುವಾರ ಜ.20 ರಂದು ಸಂಜೆ 4 ಕ್ಕೆ ಉದ್ಯಾವರದ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ನಡೆಯಲಿದೆ.
Kshetra Samachara
19/01/2022 08:47 pm