ಹೆಬ್ರಿ: ತಾಲೂಕಿನ ಶಿವಪುರದ ಆಯ್ತು ಪೂಜಾರಿಯವರ ಪುತ್ರ ದೀಕ್ಷಿತ್ (27) ಎಂಬಾತ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಇವತ್ತು ತನ್ನ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಯುವಕ ದೀಕ್ಷಿತ್ ಈ ಹಿಂದೆ ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡಿಕೊಂಡಿದ್ದು 1ತಿಂಗಳಿಂದ ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದ. ಈತ ಮಾನಸಿಕವಾಗಿ ನೊಂದಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/04/2022 07:34 pm