ಹಿರಿಯಡ್ಕ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಡಿ ಗ್ರಾಮದ ಮದಗ ಎಂಬಲ್ಲಿ ತಾಯಿ ಮಗಳ ಕೊಲೆಗಾರನನ್ನು ಪೊಲೀಸರು ಬಂಧಿಸಿದ್ದಾರೆ .ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಹರೀಶ. ಆರ್ ಯಾನೆ ಗಣೇಶ ( 29 )ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿಯು ಚೆಲುವಿ (28) ಮತ್ತು 10 ವರ್ಷ ಪ್ರಾಯದ ಮಗಳನ್ನು ಮೇ. 8 ರಂದು ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದ.ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತು.
ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ್ಲಿ ಪಿ.ಎಸ್.ಐ ಅನಿಲ್ ಬಿ ಮಾದರ, ಮಧು ಬಿ.ಇ, ಮಂಜುನಾಥ ಮರಬದ ಮತ್ತು ರವಿ ಬಿ ಕಾರಗಿ, ರಾಘವೇಂದ್ರ ಮತ್ತು ನಿತಿನ್ ರವರ ವಿಶೇಷ ತಂಡವು ಪ್ರಕರಣ ದಾಖಲಾಗಿ 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆರೋಪಿಯು ಮೃತ ಚೆಲುವಿಯ ದೂರದ ಸಂಬಂಧಿಯಾಗಿದ್ದ. ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿರುತ್ತಾರೆ. ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದ. ಚೆಲುವಿಯನ್ನು ಮದುವೆ ಆಗಬೇಕೆಂದು ಒತ್ತಾಯಿಸುತ್ತಿದ್ದ.ಚೆಲುವಿಯು ಬೇರೆ ಗಂಡಸರೊಂದಿಗೆ ಪೋನ್‌ನಲ್ಲಿ ಮಾತನಾಡುತ್ತಿದ್ದಾಳೆ ಎಂಬುದಾಗಿ ಸಂಶಯದಿಂದ ದ್ವೇಷಗೊಂಡು ದಿನಾಂಕ 08/05/2022 ರಂದು ರಾತ್ರಿ ಅವಳ ಮನೆಗೆ ತೆರಳಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಪೋನಿನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದ್ದು ಚೆಲುವಿ ಮಲಗಿದ್ದ ಸಮಯ ಚೆಲುವಿಯನ್ನು ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದ. ನಂತರ ನಿದ್ರೆಯಲ್ಲಿದ್ದ ಮಗಳು ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುತ್ತಾನೆ. ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50,000/- ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ OPPO ಮೊಬೈಲ್ ಪೋನ್‌ನ್ನು ಸುಲಿಗೆ ಮಾಡಿಕೊಂಡು ಹೋಗಿದ್ದ.
Kshetra Samachara
11/05/2022 07:51 pm