ಕುಂದಾಪುರ: ತಾಲೂಕಿನ ಕಾಳಾವಾರ ಸಮೀಪ ಕಳೆದ ಎ. 29 ರಂದು ವಿಳಾಸ ಕೇಳುವ ನೆಪದಲ್ಲಿ ಬೈಕಿನಲ್ಲಿ ಬಂದು ವೃದ್ಧೆಯೊಬ್ಬರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಿಲಕ್ ಕುಮಾರ್ ಬಂಧಿತ ಆರೋಪಿ. ಈತನಿಂದ ಕದ್ದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ.
ಎ.29 ರಂದು ಪದ್ದಮ್ಮ ಶೆಟ್ಟಿ (72) ಎಂಬುವರು ಕಾಳಾವರ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ 75 ಸಾವಿರ ರೂ. ಮೌಲ್ಯದ 2 ಪವನ್ ತೂಕದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ತಿಲಕ್ ಎಗರಿಸಿ, ಪರಾರಿಯಾಗಿದ್ದ. ಈ ಸಂಬಂಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಎಎಸ್ಪಿ ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶ್ವಸಿಯಾಗಿದೆ.
Kshetra Samachara
18/05/2022 10:54 am