ಕುಂದಾಪುರ: ಉದ್ಯಮಿ ಗೋಪಾಲಕೃಷ್ಣ ರಾವ್ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ ಜೂ. 2ಕ್ಕೆ ಮತ್ತೆ ಮುಂದೂಡಿಕೆಯಾಗಿದೆ.ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇ 30ರಂದು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಸರಕಾರಿ ಅಭಿಯೋಜಕರ ಆಕ್ಷೇಪಣೆ ಸಲ್ಲಿಕೆಗೆ ಜೂ. 1ರಂದು ದಿನ ನಿಗದಿಪಡಿಸಲಾಗಿತ್ತು. ಆದರೆ ಗೋಪಾಲಕೃಷ್ಣ ಅವರ ಮರಣೋತ್ತರ ಪರೀಕ್ಷಾ ವರದಿ ಇನ್ನೂ ಕೈ ಸೇರದ ಕಾರಣ, ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾ| ಅಬ್ದುಲ್ ರಹೀಮ್ ಹುಸೇನ್ ಶೇಖ್ ಮುಂದೂಡಿದ್ದಾರೆ.
Kshetra Samachara
03/06/2022 02:52 pm