ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಕೋಟ್ಪಾ ದಾಳಿ : 44 ಪ್ರಕರಣ ದಾಖಲು,ದಂಡ ವಸೂಲಿ

ಬ್ರಹ್ಮಾವರ : ಜಿಲ್ಲೆಯಲ್ಲಿ ಕೋಟ್ಟಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಗೂ ಕಾಲೇಜಿನ ಸುತ್ತಮುತ್ತ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಒಟ್ಟು ೪೪ ಪ್ರಕರಣಗಳನ್ನು ದಾಖಲಿಸಿ, ೫೭೫೦ ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ರಾವ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಟಿಪಿಇಓ ಗೋಪಾಲ ಶೆಟ್ಟಿ, ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ಬಿ.ಕೆ ಶಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/06/2022 06:07 pm

Cinque Terre

2.78 K

Cinque Terre

0

ಸಂಬಂಧಿತ ಸುದ್ದಿ