ಕಾರ್ಕಳ : ತಾಲೂಕಿನ ಪೆರ್ವಾಜೆ ಪತ್ತೊಂಜಿಕಟ್ಟೆ ಎಂಬಲ್ಲಿ ನಿನ್ನೆ ಸಂಜೆ ವೇಳೆ ತೋಡಿನ ನೀರಿನಲ್ಲಿ ನವಜಾತ ಶಿಶುವಿನ ಮೃತದೇಹವೊಂದು ಪತ್ತೆಯಾಗಿದ್ದು ,ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ನಿವಾಸಿ ಅಬ್ದುಲ್ ಖಾದರ್ ಎಂಬವರು ಮನೆಯಿಂದ ಕಾರ್ಕಳದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ತೋಡಿನ ನೀರಿನಲ್ಲಿ ನವಜಾತ ಶಿಶುವಿನ ಮೃತದೇಹ ತೇಲುತ್ತಿರುವುದು ಕಂಡು ಬಂತು ಎಂದು ತಿಳಿಸಿದ್ದಾರೆ.
Kshetra Samachara
22/06/2022 09:35 pm