ಉಡುಪಿ: ರಾಜಸ್ಥಾನದ ಉದಯ್‌ಪುರದಲ್ಲಿ ಟೈಲರ್ ಕನ್ನಯ್ಯಲಾಲ್ ಅವರನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದಿದ್ದ ಇಬ್ಬರು ಹಂತಕರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು. ಇಂತಹ ಸಮಾಜಘಾತುಕ ಶಕ್ತಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದು ಇಂತಹ ಅಪರಾಧ, ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ.ಎಲ್ಲರೂ ನೆಲದ ಕಾನೂನಿಗೆ ಗೌರವ ಕೊಟ್ಟು ಸಂವಿಧಾನಕ್ಕೆ ಬದ್ಧವಾಗಿ ವರ್ತಿಸಬೇಕು.
ಅನ್ಯಾಯವಾದ ಸಂದರ್ಭದಲ್ಲಿ ನ್ಯಾಯಾಲಯದ ಮುಖಾಂತರ ನ್ಯಾಯ ಪಡೆಯಬೇಕೇ ಹೊರತು ಈ ರೀತಿಯಾಗಿ ಕಾನೂನುನನ್ನು ಕೈಗೆತ್ತಿಕೊಳ್ಳುವುದು ಖಂಡನಾರ್ಹ. ಉದಯಪುರದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತಾ ಸೂಕ್ತ ತನಿಖೆ ನಡೆದು ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ.
Kshetra Samachara
30/06/2022 01:12 pm