ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಬೀಗ‌ ಮುರಿದು ಚಿನ್ನಾಭರಣ ಕಳ್ಳತನ

ಬ್ರಹ್ಮಾವರ: ಮನೆಯೊಂದಕ್ಕೆ ನುಗ್ಗಿದ ಕಳ್ಳರು 90,000 ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಹೇರಾಡಿಯಲ್ಲಿ ನಡೆದಿದೆ.

ಸಹಕಾರಿ ಸಂಘವೊಂದರಲ್ಲಿ ಕ್ಲರ್ಕ್ ಆಗಿ ಉದ್ಯೋಗ ಮಾಡಿಕೊಂಡಿರುವ, ಹೇರಾಡಿ ಗ್ರಾಮದ ಬಾರ್ಕೂರಿನ ಸಂಗೀತಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ಬೆಳಿಗ್ಗೆ ಸಂಗೀತಾ ಅವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರು. ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಮನೆಯ ಬಾಗಿಲಿನ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಕಬ್ಬಿಣದ ಟ್ರಂಕ್ ನ ಬೀಗ ಒಡೆದು ಅದರ ಒಳಗೆ ಇದ್ದ ಅಂದಾಜು 90,000 ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

01/07/2022 06:05 pm

Cinque Terre

3.86 K

Cinque Terre

0

ಸಂಬಂಧಿತ ಸುದ್ದಿ