ಕುಂದಾಪುರ: ತಾಲೂಕಿನ ಕುಂಭಾಶಿ ವಿನಾಯಕ ನಗರದ ನಿವಾಸಿ ಮಂಜುನಾಥ ಜೋಗಿ ಎಂಬವರು ಮನೆಯಲ್ಲಿ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮರವಂತೆ ನಿವಾಸಿ, ಪ್ರಸ್ತುತ ಕುಂಭಾಶಿ ವಿನಾಯಕ ನಗರಲ್ಲಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಜುಲೈ 29ರಂದು ಮಂಜುನಾಥ ಜೋಗಿ ಅವರು ಕುಟುಂಬ ಸಮೇತ ಪಂಡರಾಪುರ ಮತ್ತು ಶಿರಡಿ ದೇವಸ್ಥಾನಕ್ಕೆ ತೀರ್ಥಯಾತ್ರೆ ತೆರಳಿದ್ದರು. ಈ ವೇಳೆ ಸುಭಾಶ್ಚಂದ್ರ ಆಚಾರ್ಯ ಮನೆಯ ಬಾಗಿಲನ್ನು ಒಡೆದು ಕಪಾಟಿನಲ್ಲಿರಿಸಿದ್ದ 1 ಲಕ್ಷದ 20 ಸಾವಿರ ರೂ. ಮೌಲ್ಯದ ಒಟ್ಟು 27 ಗ್ರಾಂ ಚಿನ್ನಾಭರಣ ಮತ್ತು 13,500 ರೂ. ನಗದು ಹಣವನ್ನು ಕಳವು ಮಾಡಿದ್ದ.
ಆರೋಪಿಯನ್ನು ಸದ್ಯ ಬಂಧಿಸಿರುವ ಪೊಲೀಸರು ಆತನಿಂದ 8 ಗ್ರಾಂ ತೂಕದ ಚಿನ್ನದ ಬ್ರಾಸ್ಕೆಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ, ತೂಕದ ಚಿನ್ನದ ಉಂಗುರ ಹಾಗೂ 1,610 ರೂ. ನಗದು ಸ್ವಾಧೀನಪಡಿಸಿಕೊಂಡಿದ್ದಾರೆ.
Kshetra Samachara
11/08/2022 04:51 pm