ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿವಾದಾತ್ಮಕ ಫ್ಲೆಕ್ಸ್ ಅಳವಡಿಸಿದವರ ವಿರುದ್ಧ ರಾಷ್ಟ್ರ ದ್ರೋಹ ಪ್ರಕರಣ ದಾಖಲಿಸಿ: ಅಮೃತ್ ಶೆಣೈ

ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾವರ್ಕರ್ ಫ್ಲೆಕ್ಸ್ ಮತ್ತು ಅದರಲ್ಲಿ ಹಿಂದೂ ರಾಷ್ಟ್ರ ಎಂಬ ಬರಹ ಬರೆದು ಫ್ಲೆಕ್ಸ್ ಹಾಕಿರುವವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ ಆಗ್ರಹಿಸಿದ್ದಾರೆ.

ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾದ ಉಡುಪಿಯಲ್ಲಿ ಈ ಫ್ಲೆಕ್ಸ್ ಹಾಕಿದವರು ರಾಜಾರೋಷವಾಗಿ ಓಡಾಡುತ್ತಿದ್ದಾರೆ.ಅಲ್ಪಸಂಖ್ಯಾತರನ್ನು ಭಯದ ವಾತಾವರಣದಲ್ಲಿ ಇಡುವುದು ಮತ್ತವರನ್ನು ಎರಡನೇ ದರ್ಜೆಯ ನಾಗರೀಕರನ್ನಾಗಿ ಮಾಡುವುದೇ ಇದರ ಹಿಂದಿರುವ ಉದ್ದೇಶ.ಸಂವಿಧಾನವನ್ನು ಒಪ್ಪಿಕೊಂಡಿರುವ ಬಹು ಸಂಸ್ಕೃತಿಯ ನಾಡಿನಲ್ಲಿ ಹಿಂದೂ ರಾಷ್ಟ್ರದ ಫ್ಲೆಕ್ಸ್ ಹಾಕಿರುವುದು ಅಪರಾಧ.ಈ ಫ್ಲೆಕ್ಸ್ ಹಾಕಲು ಅನುಮತಿ ನೀಡಿದವರು ಮತ್ತು ಹಾಕಿದವರ ವಿರುದ್ದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಅಮೃತ್ ಶೆಣೈ ಜಿಲ್ಲಾ ಪೊಲೀಸರನ್ನು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

16/08/2022 08:38 pm

Cinque Terre

3.74 K

Cinque Terre

3

ಸಂಬಂಧಿತ ಸುದ್ದಿ