ಉಡುಪಿ: ರಾಜ್ಯದ ಹಲವು ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ಕುಖ್ಯಾತ ಬೈಕ್ ಕಳ್ಳನನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 5 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಳೆಹೊಸೂರು ನಿವಾಸಿ, ಗೋವಿಂದಪ್ಪ ಗಿರೀಶ ಹೇಮಣ್ಣ ಪೂಜಾರ್ ಬಂಧಿತ ಆರೋಪಿ. ಆರೋಪಿಯನ್ನು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಬಂಧಿಸಲಾಗಿದೆ. ಆರೊಪಿಯು ಉಡುಪಿ ನಗರದ ಹಲವು ಕಡೆ ಬೈಕ್ ಕಳ್ಳತನ ನಡೆಸಿದ್ದ. ಬೀಡಿನಗುಡ್ಡೆ, ಉಡುಪಿ ಕೃಷ್ಣಮಠ ಸಮೀಪ ವಿದ್ಯೋದಯ ಶಾಲೆ ಬಳಿ ನಿಲ್ಲಿಸಿದ್ದ ಬೈಕುಗಳನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ಉಡುಪಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ರಾಜ್ಯದ ನಾನಾ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
Kshetra Samachara
21/09/2022 09:31 pm