ಉಡುಪಿ: ಕನ್ನಡ ಭಾಷೆಯನ್ನು ಬೆಳೆಸಿ, ಅಭಿವೃದ್ಧಿ ಪಡಿಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯುವುದು ನಮ್ಮೆಲರ ಜವಾಬ್ದಾರಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.
ಈ ಅತ್ಯಾಧುನಿಕ ಯುಗದಲ್ಲಿ ಜನರು ತಮ್ಮ ಭಾಷಾ ಸ್ವಾಭಿಮಾನ ತೊರೆದು, ಅನ್ಯ ಭಾಷೆಯತ್ತ ವಾಲುತ್ತಿರುವುದು ಸಾಮಾನ್ಯವಾಗಿದೆ. ಈ ನಡುವೆ ಕನ್ನಡದ ರಕ್ಷಣೆ ನಮ್ಮದಾಗಲಿ ಎಂದರು.
ಈ ಸಂದರ್ಭ 40 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್ಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಗರಿಷ್ಠ ಅಂಕ ಪಡೆದ 9 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.
ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಸಿಇಒ ನವೀನ್ ಭಟ್, ನೀಲಾವರ ಸುರೇಂದ್ರ ಅಡಿಗ,ರಾಘವೇಂದ್ರ ಕಿಣಿ,ಎಸ್ಪಿ ವಿಷ್ಣುವರ್ಧನ್,ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್,ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್,ಎಡಿಸಿ ಸದಾಶಿವ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
Kshetra Samachara
01/11/2020 12:29 pm