ಉಡುಪಿ: ಶ್ರೀ ಕೃಷ್ಣಮಠದಲ್ಲಿ ಉತ್ಥಾನ ದ್ವಾದಶಿಯಂದು ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ಸಂಪನ್ನಗೊಂಡಿತು.
ಉತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಪಾಲ್ಗೊಂಡಿದ್ದರು. ಮಧ್ವ ಸರೋವರದಲ್ಲಿ ನಡೆದ ಆಕರ್ಷಕ ತೆಪ್ಪೋತ್ಸವ ಭಕ್ತ ಸಮೂಹಕ್ಕೆ ರೋಮಾಂಚನ ಉಂಟುಮಾಡಿತು.
Kshetra Samachara
27/11/2020 10:23 pm