ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉತ್ಥಾನ ದ್ವಾದಶಿ ಪ್ರಯುಕ್ತ ಮಠಾಧೀಶರಿಂದ ವಿಶೇಷ ಪೂಜೆ, ಕ್ಷೀರಾಬ್ದಿ ಅರ್ಘ್ಯ

ಉಡುಪಿ: ಶ್ರೀ ಕೃಷ್ಣಮಠದ ಮಧ್ವ ಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಉತ್ಥಾನ ದ್ವಾದಶಿಯ ದಿನವಾದ ಇಂದು ಸಾಯಂಕಾಲ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಮಾಡಿ ಕ್ಷೀರಾಬ್ದಿ ಅರ್ಘ್ಯ ನೀಡಿದರು. ಕೊರೊನಾ ಕಾರಣದಿಂದಾಗಿ ಈ ಬಾರಿ ಭಕ್ತರ ಸಂಖ್ಯೆ ವಿರಳವಾಗಿತ್ತು.

Edited By : Vijay Kumar
Kshetra Samachara

Kshetra Samachara

27/11/2020 10:25 pm

Cinque Terre

2.82 K

Cinque Terre

0

ಸಂಬಂಧಿತ ಸುದ್ದಿ