ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗುರುಗಳಂತೆ ದಲಿತ ಕೇರಿಗೆ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಭೇಟಿ

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ತಮ್ಮ ಗುರಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ಶ್ರೀಗಳ ದಾರಿಯಲ್ಲಿ ಹೆಜ್ಜೆ ಹಾಕಿದ್ದಾರೆ.

ಹಿಂದೂ ಸಮಾಜದಲ್ಲಿದ್ದ ಅಸ್ಪೃಶ್ಯತೆಯನ್ನು ನಿವಾರಿಸಿ ಸಶಕ್ತ ಸುದೃಢಗೊಳಿಸುವ ನಿಮಿತ್ತ ವಿಶ್ವಪ್ರಸನ್ನ ತೀರ್ಥರು ದಲಿತರ ಕಾಲೋನಿಗೆ ಭೇಟಿ ನೀಡಿದ್ದಾರೆ. ಭಾನುವಾರ ಉಡುಪಿಯ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿ ಪರಿಶಿಷ್ಟರ ಬಡಾವಣೆಗೆ ತಮ್ಮ ಮೊದಲ ಭೇಟಿ ನೀಡಿದ್ದು, ಹಿಂದೂ ಸಮಾಜ ಸಂಘಟನೆಗೆ ತಾವೂ ಸಿದ್ಧ ಎಂದು ಹೇಳಿದ್ದಾರ.

ಅಯೋಧ್ಯೆ ರಾಮ ಮಂದಿರ ನಿರ್ಮಾಣವನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಭಾರತದಲ್ಲಿ ಹಿಂದೂ ಸಮಾಜವನ್ನು ಸಂಘಟನಾತ್ಮಕವಾಗಿ ಸಶಕ್ತ ಮತ್ತು ಸುದೃಢಗೊಳಿಸಬೇಕಾಗಿದೆ. ಈ ಆಶಯದೊಂದಿಗೆ ಸುಮಾರು 120 ಮನೆಗಳನ್ನು ಹೊಂದಿರುವ ಈ ಬಡಾವಣೆಗೆ ಭೇಟಿ ನೀಡಿರುವೆ ಎಂದು ಶ್ರೀಗಳು ತಿಳಿಸಿದರು.

Edited By : Vijay Kumar
Kshetra Samachara

Kshetra Samachara

20/12/2020 09:28 pm

Cinque Terre

3.26 K

Cinque Terre

2

ಸಂಬಂಧಿತ ಸುದ್ದಿ