ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ “ವಾಶ್” (ಸುರಕ್ಷತೆ ಮತ್ತು ನೈರ್ಮಲ್ಯಕ್ಕಾಗಿ ಕಾರ್ಯಸ್ಥಳದ ಮೌಲ್ಯಮಾಪನ) ಪ್ರಮಾಣಪತ್ರವು ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕೆದಾರರ ಮಾನ್ಯತೆ ಪಡೆದ ಸಂಘ (ಎನ್ ಎ ಬಿ ಎಚ್), ಭಾರತೀಯ ಗುಣಮಟ್ಟದ ಮಂಡಳಿ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ) ಯಿಂದ ದೊರೆತಿದೆ.
ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸೋಂಕು ನಿಯಂತ್ರಣ ಸಮಿತಿ ಮುಖ್ಯಸ್ಥ ಡಾ. ಮುರಳೀಧರ ವರ್ಮಾ ಮತ್ತು ಅವರ ತಂಡಕ್ಕೆ ಪ್ರಮಾಣ ಪತ್ರ ಹಸ್ತಾಂತರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ. ಮುತ್ತನ, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಡಾ. ಸುನಿಲ್ ಮುಂಡ್ಕೂರು,ಸಲಹೆಗಾರ-ಗುಣಮಟ್ಟದ ಅನುಷ್ಠಾನ ಮತ್ತು ಜಿಬು ಥಾಮಸ್ ಉಪಸ್ಥಿತರಿದ್ದರು.
ಈ ಪ್ರಮಾಣಪತ್ರದೊಂದಿಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಗುಣಮಟ್ಟ ಮತ್ತು ಮಾನ್ಯತೆಗಳ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದಂತಾಗಿದೆ.
Kshetra Samachara
21/12/2020 07:05 pm