ಉಡುಪಿ: ಪಕ್ಷದ ವಿವಿಧ ಸ್ತರಗಳಲ್ಲಿ ಅನನ್ಯ ಜವಾಬ್ದಾರಿ ನಿರ್ವಹಿಸಿ, ಸತತ ನಾಲ್ಕು ಬಾರಿ ಸಂಸದರಾಗಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾರ್ಥಕ ಜನಸೇವೆಗೈದ ಸುರೇಶ್ ಅಂಗಡಿ ಅವರ ಪಕ್ಷ ನಿಷ್ಠೆ, ಸೇವಾ ತತ್ಪರತೆ ಅನುಕರಣೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್ ಅಧ್ಯಕ್ಷತೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಪ್ರಯುಕ್ತ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದರು.
ಜಿ.ಪಂ. ಅಧ್ಯಕ್ಷ ಹಾಗೂ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರ.ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಮಹಿಳಾ ಮೋರ್ಚಾ ರಾಜ್ಯ ಪ್ರ.ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ನಗರ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರ ಪಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಮೋರ್ಚಾ-ಮಂಡಲಗಳ ಪದಾಧಿಕಾರಿಗಳು, ಪ್ರಕೋಷ್ಠ-ಮಹಾ ಶಕ್ತಿಕೇಂದ್ರಗಳ ಸಂಚಾಲಕರು-ಸಹ ಸಂಚಾಲಕರು, ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
25/09/2020 05:07 pm