ಉಡುಪಿ :ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿ, ಕುಂಜಿಬೆಟ್ಟು ಜೀರ್ಣೋದ್ಧಾರ ಸಮಿತಿ ಸಭೆ ನಡೆಯಿತು. ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಶ್ರೀದೇವಳದ ಜೀರ್ಣೋದ್ಧಾರದ ಮನವಿ ಪತ್ರದ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಮಲ್ಪೆ ವಿಶ್ವನಾಥ್ ಭಟ್, ಎಸ್. ನಾರಾಯಣ್ ಮಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಮೋಹನ್ ಉಪಾಧ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದಿನಕರ್ ಪೂಜಾರಿ, ಜೀರ್ಣೋದ್ಧಾರ ಸಮಿತಿ ಮುಖ್ಯ ಕಾರ್ಯದರ್ಶಿ ಶ್ರೀಷ ನಾಯಕ್ ಹಾಗೂ ಪ್ರಮುಖರು ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
11/01/2021 12:35 pm