ಕೋಟ:ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲೂಕು ಘಟಕ ಸಾರಥ್ಯದಲ್ಲಿ ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾಬ್ರಕಟ್ಟೆ-ಯಡ್ತಾಡಿ ಇವರ ಸಹಯೋಗದಲ್ಲಿ ನಡೆಯುವ ಬ್ರಹ್ಮಾವರ ತಾಲೂಕು ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಮಲಸಾವರಿ ದೇವಸ್ಥಾನ ಯಡ್ತಾಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ರೂಪುರೇಷೆ ಬಗ್ಗೆ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ವಿವರಿಸಿದರು. ಜನವರಿ 24 ರಂದು ಮಹಾತ್ಮಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆಯಲ್ಲಿ ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಆನ್ ಲೈನ್ ಮೂಲಕ ನಡೆಸುವ ಬಗ್ಗೆ ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ನಾರಾಯಣ ಮಡಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪರಿಷತ್ತಿನ ಸಂಘಟನ ಕಾರ್ಯದರ್ಶಿ ಅಲ್ತಾರು ನಾಗರಾಜ್, ಶ್ರೀವಿನಾಯಕ ಯುವಕ ಮಂಡಲದ ಅಧ್ಯಕ್ಷ ಶ್ರೀ ರತ್ನಾಕರ ಪೂಜಾರಿ, ಕಾರ್ಯದರ್ಶಿ ಶ್ರೀ ಪ್ರಶಾಂತ ಸೂರ್ಯ, ಹಾಗೂ ಸದಸ್ಯರು ಉಪಸ್ಥಿರಿದ್ದರು.
Kshetra Samachara
13/01/2021 04:19 pm