ಉಡುಪಿ: ವಸ್ತುಪ್ರದರ್ಶನದಲ್ಲಿ ಪರ್ಯಾಯ ಪೀಠಾಧೀಶ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಬಿದರಿನಿಂದ ತಯಾರಿಸಿದ ಟೊಪ್ಪಿಗಳನ್ನು ಪರಸ್ಪರ ತೊಡಿಸಿ ಸಂಭ್ರಮಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ದ್ವೈವಾರ್ಷಿಕ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮವು 8 ದಿನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಗ್ರಾಮೀಣ ಭಾಗದ ಶ್ರಮಿಕ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಷ್ಟ್ರಮಟ್ಟದ ಗ್ರಾಮೀಣ ಉತ್ಪನ್ನಗಳ ಮೇಳ, ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ.
ಬೆಳಗಾವಿ, ಹುಬ್ಬಳ್ಳಿ, ಬಿಜಾಪುರ, ಧಾರವಾಡ, ಶಿರಸಿ, ಕುಂದಾಪುರ, ಬೆಂಗಳೂರು, ಉಡುಪಿ ಸೀರೆ, ಮಣ್ಣಿನ, ಹುಲ್ಲಿನ, ಮರದ ಕಲಾಕೃತಿಗಳು, ಸಾವಯವ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ತುಳುನಾಡ ಪಾರಂಪರಿಕ ಪರಿಕರಗಳ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ಕಲಾ ಪ್ರಕಾರಗಳಾದ ಮಣ್ಣಿನ ಕಲಾಕೃತಿ ರಚನೆ, ಬುಟ್ಟಿ ರಚನೆ, ಸಹಜ ಬಣ್ಣದಲ್ಲಿ ಚಿತ್ರ ರಚನೆ ಮುಂತಾದ ಕಲಾ ಪ್ರಾತ್ಯಕ್ಷಿಕೆಯನ್ನು ಶ್ರೀಗಳು ವೀಕ್ಷಿಸಿದರು.
ಪಶ್ಚಿಮ ಬಂಗಾಲ, ಒರಿಶಾ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರದ ಮಧುಬನಿ ಕಲಾಪ್ರಕಾರ, ಮಿಥಿಲಾ ಚಿತ್ರ, ಮಂಜುಷಾ ಚಿತ್ರ, ಗೋದ್ನ ಚಿತ್ರ, ಕಾಲಿಘಟ್ ಪೈಂಟಿಂಗ್, ಪಟಚಿತ್ರ, ಲೋಹಶಿಲ್ಪ, ಎರಕಶಿಲ್ಪ, ಗೋಂಡು ಕಲಾಕೃತಿ, ಮಣ್ಣಿನ, ಹುಲ್ಲಿನ ಕಲಾಕೃತಿಗಳು ಗಮನ ಸೆಳೆಯುತ್ತಿವೆ.
Kshetra Samachara
18/01/2021 03:02 pm