ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರಿನಲ್ಲಿ ಸುಗ್ಗಿ-ಹುಗ್ಗಿ ಜಾನಪದ ಉತ್ಸವಕ್ಕೆ ಸಕಲ ಸಿದ್ಧತೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಸುಗ್ಗಿ ಹುಗ್ಗಿ ಜಾನಪದ ಉತ್ಸವ ಕಾರ್ಯಕ್ರಮವು ಫೆಬ್ರವರಿ 13 ರಂದು ಸಂಜೆ 5.30 ಕ್ಕೆ ಬೈಂದೂರು ರಥಬೀದಿ ಶ್ರೀ ಸೇನೇಶ್ವರ ದೇವಸ್ಥಾನದ ವೇದಿಕೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಗೃಹ, ಕಾನೂನು, ಸಂಸದೀಯ ವ್ಯವಹಾರ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಭಾ ಸದಸ್ಯ ಓಸ್ಕರ್ ಫೆರ್ನಾಂಡೀಸ್, ಸಂಸದರುಗಳಾದ ಬಿ.ವೈ.ರಾಘವೇಂದ್ರ, ವಿಧಾನಪರಿಷತ್ ಶಾಸಕರುಗಳಾದ ಕೆ. ಪ್ರತಾಪಚಂದ್ರ ಶೆಟ್ಟಿ, ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ಬೈಂದೂರು ತಹಶೀಲ್ದಾರ್ ಕಿರಣ್, ಜಿ. ಗೌರಯ್ಯ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

13/02/2021 12:30 pm

Cinque Terre

4.05 K

Cinque Terre

0

ಸಂಬಂಧಿತ ಸುದ್ದಿ