ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪುಲ್ವಾಮ ಹುತಾತ್ಮರ ಸ್ಮರಣಾರ್ಥ 'ಯೋಧ ನಮನ'

ಉಡುಪಿ: ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರು ರಾಷ್ಟ್ರಕ್ಕಾಗಿ ಮಾಡಿದ ತ್ಯಾಗ- ಬಲಿದಾನವನ್ನು ಸ್ಮರಿಸುವ ನಿಟ್ಟಿನಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ, ಉಡುಪ ರತ್ನ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಹುತಾತ್ಮ ಸೈನಿಕ ಯುದ್ಧ ಸ್ಮಾರಕದಲ್ಲಿ ಭಾನುವಾರ ಸಂಜೆ 'ಯೋಧ ನಮನ' ನಡೆಯಿತು.

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕ ಗಣೇಶ್ ರಾವ್ ಮಾತನಾಡಿ, ಯುವಜನರಿಗೆ ಸೇನೆಗೆ ಸೇರಲು ಇದೊಂದು ಪ್ರಶಸ್ತ ಸಮಯ. ಸೇನೆಯಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಯಾವುದರಲ್ಲಿಯೂ ಸಿಗಲು ಅಸಾಧ್ಯ. ಅರ್ಪಣಾ ಮನೋಭಾವದಿಂದ ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿ ಬದುಕನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿದ ಹೆಮ್ಮೆಯ ಯೋಧರೇ ನಮಗೆಲ್ಲ ಸ್ಫೂರ್ತಿ. ದೇಶಕ್ಕಾಗಿ ಸೇವೆ ಸಲ್ಲಿಸಲು ಸಿಕ್ಕಿದ ಅವಕಾಶ ಎಂದಿಗೂ ಮರೆಯಲು ಅಸಾಧ್ಯ ಎಂದರು.

ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಮಾಜಿ ಸೈನಿಕರಾದ ಸೈಮನ್ ಡಿಸೋಜ, ಭೀಮಯ್ಯ, ವಕೀಲ ರಫೀಕ್ ಖಾನ್, ಉದಯ ನಾಯ್ಕ್, ನಾಗರಾಜ್ ಭಂಡಾರ್ಕರ್, ಲಕ್ಷ್ಮಣ ಬಿ. ಕೋಲ್ಕಾರ, ಸವಿತಾ ನೋಟಗಾರ್, ಈರಪ್ಪ ಗೌಂಡಿ, ರಮೇಶ್ ಎಲಿಬಳ್ಳಿ, ಪಾಂಪೇಶ್, ಹನುಮಂತ ರಾಯ ಪೂಜಾರಿ, ಶರಣಪ್ಪ, ರಾಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

14/02/2021 10:09 pm

Cinque Terre

6.33 K

Cinque Terre

1

ಸಂಬಂಧಿತ ಸುದ್ದಿ