ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಶಕ್ತಿ ಕೇಂದ್ರ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಬೋರ್ಡ್ ಹೈಸ್ಕೂಲ್ ನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಂಗವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಹದಿಹರೆಯದ ಆರೋಗ್ಯ ಮತ್ತು ಜೀವನ ಕೌಶಲ್ಯದ ಅರಿವು ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉಡುಪಿ ನಗರ ಸಭೆಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ನಾಯಕ್ ಉದ್ಘಾಟಿಸಿ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ" ಭವ್ಯ ಭಾರತದ ನಿರ್ಮಾಣದಲ್ಲಿ ಹೆಣ್ಣು ಮಕ್ಕಳ ಪಾತ್ರ ಬಹುಮುಖ್ಯ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಶ್ರೀಮತಿ ನಾಗರತ್ನ ನಾಯಕ್ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ಮಾಹಿತಿ ನೀಡಿದರು. ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸದಾನಂದ ನಾಯಕ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗ ವಿಶೇಷವಾಗಿ ಪೋಕ್ಸೋ ಕಾಯಿದೆ, ಲಿಂಗ ಸಮಾನತೆ ಹಾಗು ಹದಿಹರೆಯದ ಆರೋಗ್ಯದ ಕುರಿತು ಮಾಹಿತಿ ನೀಡಿದರು ಮತ್ತು ಜೀವನದಲ್ಲಿ ಸಕಾರಾತ್ಮಕ್ತ ಮನೋಭಾವ ಬೆಳೆಸಿಕೊಳ್ಳಿ ಎಂದರು.
ಮಹಿಳಾ ಶಕ್ತಿ ಕೇಂದ್ರದ ಮಹಿಳಾ ಕಲ್ಯಾಣಧಿಕಾರಿ ಶ್ರೀಮತಿ ದೀಪ ಕಾರ್ಯಕ್ರಮ ನಿರೂಪಿಸಿದರು ಹಾಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ ವಂದಿಸಿದರು. ಮಹಿಳಾ ಶಕ್ತಿ ಕೇಂದ್ರ ಜಿಲ್ಲಾ ಸಂಯ್ಯೋಜಕಾರದ ಶ್ರೀಮತಿ ಶಾರದಾ ವೈ ಹಾಗು ಶ್ರೀಮತಿ ಅನುಷ ಮತ್ತು ಮಕ್ಕಳ ರಕ್ಷಣಾಧಿಕಾರಿ ಮಹೇಶ್ ಉಪಸ್ಥಿತರಿದ್ದರು.
Kshetra Samachara
18/02/2021 09:35 pm