ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆ: ಸಚಿವ ಸುನಿಲ್ ಕುಮಾರ್

ಉಡುಪಿ: ರಾಜ್ಯಮಟ್ಟದಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ನಾರಾಯಣ ಗುರುಗಳ ಆದರ್ಶ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಇಂದು ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಿಲ್ಲಾಡಳಿತ, ಬಿಲ್ಲವ ಸೇವಾ ಸಂಘ ಇವರ ಸಂಯುಕ್ತಾಶ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಬಾರಿಯ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಪ್ರಗತಿ, ಕ್ರಾಂತಿಕಾರಿ ಬದಲಾವಣೆಯನ್ನು ಕಂಡಿದ್ದರೂ ಸಹ ಸಮಾಜದಲ್ಲಿ ಇನ್ನೂ ಮೇಲು ಕೀಳು ಭಾವನೆ, ಜಾತಿಯ ಸಂಘರ್ಷಗಳು, ಅಸಮಾನೆತೆಯ ಧ್ವನಿ ಇಂದಿಗೂ ಈ ಸಮಾಜದಲ್ಲಿ ಕಂಡು ಬರುತ್ತಿದೆ ಎಂದರು.

ಅಂದು ನಾರಾಯಣ ಗುರುಗಳು ತಮ್ಮ ಕೀಳರಿಮೆ ಭಾವನೆಗಳನ್ನು ಹೋಗಲಾಡಿಸುವ ಸಲುವಾಗಿ ಅವರ ಬೋಧನೆಗಳನ್ನು ನಡವಳಿಕೆಗಳ ಮುಖಾಂತರ ಸಮಾಜಕ್ಕೆ ಮಾದರಿಯಾಗಿದ್ದರು. ಅದೇ ರೀತಿಯ ಭಾವನೆಗಳು ಇಂದು ಸಮಾಜದಲ್ಲಿ ಒಗ್ಗೂಡಿಸುವಂತಹ ಪ್ರಯತ್ನ ಮಾಡಬೇಕಾಗಿದೆ ಎಂದರು.

ಆರ್ಥಿಕವಾಗಿ ಸಮುದಾಯದ ಜನರನ್ನು ಬಲಹಿತರನ್ನಾಗಿ ಮಾಡುವಂತಹ ನಿಟ್ಟಿನಲ್ಲಿ ನಾರಾಯಣ ಗುರು ಹೆಸರಿನಲ್ಲಿ ನಿಗಮವನ್ನು ಮಾಡುವ ಸರ್ಕಾರದ ಚಿಂತನೆಯಿದ್ದು ಮುಂದಿನ ದಿನಗಳಲ್ಲಿ ಅತೀ ಶೀಘ್ರದಲ್ಲಿ ಈ ಯೋಜನೆಯನ್ನು ಮಾಡುತ್ತೇವೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

23/08/2021 04:04 pm

Cinque Terre

1.39 K

Cinque Terre

0

ಸಂಬಂಧಿತ ಸುದ್ದಿ