ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಗ್ರಾಮೀಣ ವಿದ್ಯಾರ್ಥಿಗಳಿಂದ ಸಾಂಪ್ರದಾಯಿಕ ಶೈಲಿಯ ಗೂಡುದೀಪ ರಚನೆ

ಕುಂದಾಪುರ: ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ,ಜೀವಿ ಆರ್ಟ್ಸ್ ,ಅನಂತ ಸ್ಕೂಲ್ ಆಫ್ ಫೈನ್ ಆರ್ಟ್ಸ್ ಆನೆಗುಡ್ಡೆ ಇವರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮನಿ ಗೂಡ್ದೀಪ - ೨೦೨೧ ನಡೆಯಿತು. ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ಶೈಲಿಯ ಗೂಡುದೀಪ ರಚನಾ ಪ್ರಾತ್ಯಕ್ಷಿಕೆ ಹಾಗೂ ಉಚಿತ ತರಬೇತಿ ಕಾರ್ಯಾಗಾರ ಹಮ್ನಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಜಾನ್ ಡಿಸೋಜಾ ಉದ್ಘಾಟಿಸಿದರು.

ಈ ಸಂದಭದಲ್ಲಿ ವಿವಿಧ ವಿನ್ಯಾಸದ ಸಾಂಪ್ರದಾಯಿಕ ಶೈಲಿಯ ಕಲಾತ್ಮಕ ಗೂಡುದೀಪಗಳ ತಯಾರಿಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡರು. ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಿಂದ ಕಲಾತ್ಮಕ ಗೂಡುದೀಪಗಳು ಮೂಡಿಬಂದವು. ವಿದ್ಯಾರ್ಥಿಗಳು ಸಿದ್ದಪಡಿಸಿದ ಗೂಡುದೀಪಗಳನ್ನು ಅವರ ಮನೆಗಳಲ್ಲಿ ಅಲಂಕರಿಸಲು ಅವಕಾಶ ಕಲ್ಪಿಸಲಾಗಿದೆ. ಮರೆಯಾಗುತ್ತಿರುವ ಅತ್ಯಮೂಲ್ಯ ಸಾಂಪ್ರದಾಯಿಕ ಶೈಲಿಯ ಗೂಡುದೀಪದ ಜತೆಗೆ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಸೆಲ್ಫಿ ತೆಗೆದು ಸಂಘಟಕರಿಗೆ ಕಳುಹಿಸುವ ಮೂಲಕ ಅರ್ಥಪೂರ್ಣವಾಗಿ ಕಾರ್ಯಾಗಾರ ಸಂಪನ್ನಗೊಂಡಿತು. ಪ್ಲಾಸ್ಟಿಕ್ ಬೀಡಿಂಗ್, ಬಣ್ಣದ ಕಾಗದ, ಗಮ್, ನೂಲುಗಳನ್ನು ಬಳಸಿ ಗೂಡುದೀಪ ತಯಾರಿಸಲಾಗಿದ್ದು ಸುಮಾರು ೨೫ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

02/11/2021 03:27 pm

Cinque Terre

4.1 K

Cinque Terre

0

ಸಂಬಂಧಿತ ಸುದ್ದಿ