ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನ.11ರಂದು ಪೇಜಾವರ ಶ್ರೀಗಳ ಪದ್ಮವಿಭೂಷಣ ಪ್ರಶಸ್ತಿ ಕೃಷ್ಣದೇವರಿಗೆ ಅರ್ಪಿಸಿ ಗೌರವ

ಉಡುಪಿ: ಭಾರತ ಸರ್ಕಾರದಿಂದ ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ನವಂಬರ್ 11 ಗುರುವಾರದಂದು ಸಂಜೆ ಉಡುಪಿಯಲ್ಲಿ ಭಕ್ತಿ ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು.

ಅಂದು ಸಂಜೆ 4.30 ಕ್ಕೆ ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತರಲಾಗುವುದು. ಶ್ರೀ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಕೃಷ್ಣ ದೇವರಿಗೆ ಅರ್ಪಿಸಿ , ಅಷ್ಟ ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತರಲಾಗುವುದು. ಅಲ್ಲಿ ಗುರುಗಳ ಪೀಠದಲ್ಲಿಟ್ಟು ಅರ್ಪಿಸಿದ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ವಿವಿಧ ಮಠಾಧೀಶರುಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಪೇಜಾವರ ಮಠದ ಮುಂಭಾಗದಲ್ಲಿ ಸಭೆ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

10/11/2021 09:29 pm

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ