ಮಂಗಳೂರು: ಹರಿಪಾದಗೈದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ಹಿನ್ನೆಲೆಯಲ್ಲಿ ನವದೆಹಲಿಗೆ ತೆರಳಿದ್ದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮಂಗಳೂರಿಗೆ ಆಗಮಿಸಿದ್ದಾರೆ.
ನಗರದ ಕದ್ರಿಯಲ್ಲಿರುವ ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸಕ್ಕೆ ಆಗಮಿಸಿದ ಸ್ವಾಮೀಜಿಯವರಿಗೆ ಭಕ್ತರಿಂದ ಆತ್ಮೀಯ ಸ್ವಾಗತ ಕೋರಲಾಯಿತು. ನಂತರ ವಾದಿರಾಜ ಮಂಟಪದಲ್ಲಿ ಶ್ರೀ ವಿಶ್ವೇಶತೀರ್ಥರ ನಮನ ಕಾರ್ಯಕ್ರಮ ನಡೆಯಿತು.
ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪಾದುಕೆ, ಭಾವಚಿತ್ರದ ಮುಂದೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ಇರಿಸಿ, ವಿಶೇಷ ಆರತಿ ಬೆಳಗಿಸಲಾಯಿತು.
ಈ ಸಂದರ್ಭ ಭಕ್ತರು, ಸ್ವಾಮೀಜಿಯವರಿಗೆ ಫಲ-ಪುಷ್ಪ ನೀಡಿ ಗೌರವ ಸಲ್ಲಿಸಿದರು.
Kshetra Samachara
11/11/2021 02:03 pm