ಉಡುಪಿ: ಉಡುಪಿಯಲ್ಲಿ ಇಂದು ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಅಭಿನಂದನೆ ಸಮಾರಂಭ ಏರ್ಪಡಿಸಲಾಯಿತು.
ಉಡುಪಿ ಎಂಜಿಎಂ ಕಾಲೇಜಿನಲ್ಲಿ ಅಭಿನಂದನೆ ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಮತ್ತಿತರ ಗಣ್ಯರು ಹಾಜಬ್ಬ ಅವರಿಗೆ ಸ್ವಾಗತ ಕೋರಿದರು.
ಕಾರ್ಯಕ್ರಮಕ್ಕೆ ಮುನ್ನ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹಾಜಬ್ಬ ಮತ್ತು ಗಣ್ಯರು ಗೌರವ ವಂದನೆ ಸ್ವೀಕರಿಸಿದರು. ವಿದ್ಯಾರ್ಥಿಗಳು ಪಥಸಂಚಲನ ಮೂಲಕ ಹಾಜಬ್ಬ ಮತ್ತು ಗಣ್ಯರನ್ನು ವೇದಿಕೆಯತ್ತ ಕರೆ ತಂದರು. ಎಂಜಿಎಂ ಕಾಲೇಜಿನಲ್ಲಿ ಸಂವಾದ ಏರ್ಪಡಿಸಲಾಗಿದ್ದು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
Kshetra Samachara
17/11/2021 05:36 pm